ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ

Update: 2023-11-08 14:07 GMT

credit: PTI Photo

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಹಾಸನದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ'' ಎಂದು ತಿಳಿಸಿದರು. 

'ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯ ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ' ಎಂದು ಹೇಳಿದರು. 

ಜೆ.ಪಿ. ನಡ್ಡಾ ಭೇಟಿಗೆ ಅವಕಾಶ ಸಿಗದೆ ಬೆಂಗಳೂರಿಗೆ ವಾಪಸ್ ಆಗಿದ್ದ ಸದಾನಂದ ಗೌಡ

ಅಕ್ಟೋಬರ್ 25 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಅವರ ಆಹ್ವಾನದ ಮೇರೆಗೆ ದೆಹಲಿಗೆ ತೆರಳಿದ್ದ ಸದಾನಂದ ಗೌಡ ಅವರಿಗೆ ಮೂರು ದಿನಗಳು ಕಾದರೂ ವರಿಷ್ಠರನ್ನು ಭೇಟಿ ಮಾಡಲು ಸಾಧ್ಯವಾಗದೆ ಬೆಂಗಳೂರಿಗೆ ವಾಪಸ್ಸಾಗಿದ್ದರು. ಅಲ್ಲದೇ, ರಾಜ್ಯದಲ್ಲಿ ಪಕ್ಷದ ನಾಯಕತ್ವದ ಆಯ್ಕೆ ವಿಳಂಬ ಆಗಿರೋದಕ್ಕೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು.  

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News