ಕೋಲಾರ ಜಿಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೊಲೆ ಪ್ರಕರಣ : ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ

Update: 2025-03-18 00:08 IST
ಕೋಲಾರ ಜಿಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೊಲೆ ಪ್ರಕರಣ : ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
  • whatsapp icon

ಬೆಂಗಳೂರು : ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಸಿಬಿಐ ತನಿಖೆ ಕೋರಿ ಪತ್ನಿ ಡಾ.ಎಸ್. ಚಂದ್ರಕಲಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ಸ್ಥಳೀಯ ಪೊಲೀಸರು, ಸಿಐಡಿ ಸಮರ್ಪಕ ತನಿಖೆ ನಡೆಸಿಲ್ಲ. ಸತ್ಯವನ್ನು ಆಳವಾದ ನೀರಿನಲ್ಲಿ ಮುಳುಗಿಸಲಾಗಿದೆ. ಹೀಗಾಗಿ ಸಿಬಿಐ ತನಿಖೆ ಅನಿವಾರ್ಯವೆಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ತನಿಖೆ ನಡೆಸಿ 3 ತಿಂಗಳಿನಲ್ಲಿ ವರದಿ ಸಲ್ಲಿಸಲು ಸಿಬಿಐಗೆ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News