ತಿಂದ ಅನ್ನದ ಋಣ ತೀರಿಸಿ ಹೋಗಬೇಕು...: ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಮಾಧುಸ್ವಾಮಿ ಹೇಳಿದ್ದೇನು?

Update: 2023-07-03 06:19 GMT
ಫೈಲ್ ಚಿತ್ರ

ಚಿಕ್ಕನಾಯಕನಹಳ್ಳಿ (ತುಮಕೂರು): ಕಳೆದ ಕೆಲವು ದಿನಗಳಿಂದ ಮಾಜಿ ಸಚಿವ, ಬಿಜೆಪಿ ನಾಯಕ ಮಾಧುಸ್ವಾಮಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಜೆ.ಸಿ.ಮಾಧುಸ್ವಾಮಿ ಅವರೇ ಪ್ರತಿಕ್ರಿಯಿಸಿದ್ದಾರೆ.

ರವಿವಾರ ಪಟ್ಟಣದ ನವೋದಯ ಕಾಲೇಜು ಆವರಣದಲ್ಲಿ ಚುನಾವಣೆ ಬಳಿಕ ಮೊದಲ ಬಾರಿಗೆ ಕಾರ್ಯಕರ್ತರ ಸಭೆ ನಡೆಸಿ ಮಾತನಾಡುತ್ತಿದ್ದ ಅವರು, ''ಬಿಜೆಪಿ ನನ್ನನ್ನು ಅತಿ ಹೆಚ್ಚು ಗೌರವದಿಂದ ನಡೆಸಿಕೊಳ್ಳುತ್ತಿದೆ. ಆ ಪಕ್ಷದ ಋಣ ತೀರಿಸುವ ಜವಾಬ್ದಾರಿ ನನಗಿದೆ. ಗೆಲುವು ಸೋಲು ಮುಖ್ಯವಲ್ಲ. ತಿಂದ ಅನ್ನದ ಋಣ ತೀರಿಸಿ ಹೋಗಬೇಕು. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ಗೆ ಹೋಗುವುದಿಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ. 

''ಸೋತಿರುವುದಕ್ಕೆ ಪಕ್ಷ ಬಿಡುವುದು ಧರ್ಮವಲ್ಲ. ನಾನು ಕೇಳದೆಯೇ ಬಿಜೆಪಿ ಮಂತ್ರಿ ಸ್ಥಾನ ಕೊಟ್ಟಿದೆ. ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಸಣ್ಣ ಆಲೋಚನೆಯನ್ನೂ ಮಾಡಿಲ್ಲ. ಕೆಲವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ಹೋಗುವ ದುಃಸ್ಥಿತಿ ನನಗೇನಿದೆ? ಒಂದು ವೇಳೆ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಯಾದರೆ ಯೋಚಿಸೋಣ'' ಎಂದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News