ಮಾಜಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ ಕಾಂಗ್ರೆಸ್‌ ಸೇರ್ಪಡೆ ವಿಚಾರ: ಜಗದೀಶ್ ಶೆಟ್ಟರ್ ಹೇಳಿದ್ದೇನು?

Update: 2023-08-28 06:54 GMT

ಹುಬ್ಬಳ್ಳಿ: ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವ ಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲಾ. ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲಾ.  ಶಂಕರಪಾಟೀಲ್‌ ಮುನೇನಕೊಪ್ಪ ಅವರು ಸುದ್ದಿ ಗೋಷ್ಠಿ ಕರೆದದ್ದು ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ. ಈ ಬಗ್ಗೆ ನಾನು ಏನು ಹೇಳೋಕೆ ಬರಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸುದ್ಧಿಗೋಷ್ಟಿ ಯಾಕೆ ಕರೆದಿದ್ದಾರೆ ಅಂತ ಅವರೇ ಹೇಳಬೇಕು. ಇನ್ನೂ ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರುತ್ತಿದ್ದಾರೆ. ಬಿಜೆಪಿ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ನಾಯಕನಿಲ್ಲದೆ ಸೊರಗುತ್ತಿದೆ. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇದುವರೆಗೂ ನೇಮಕ ಮಾಡಲಾಗುತ್ತಿಲ್ಲ ಅವರಿಗೆ ಈ ರೀತಿ ಶೋಚನಿಯ ಪರಿಸ್ಥಿತಿ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಬಂದಿರಲಿಲ್ಲ ಎಂದರು.

ಹೊರಟ್ಟಿ ಅವರಿಗೆ ಚೀಟಿ ಎತ್ತಿ ತಾತ್ಕಾಲಿಕವಾಗಿ ಯಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದಿದ್ದೆ. ರಾಜ್ಯದ ಬಿಜೆಪಿ ನಾಯಕರ ಮೇಲೆ ನಂಬಿಕೆ ಕೇಂದ್ರದವರಿಗೆ ಹೋಗಿದೆ. ಮೋದಿಯವರನ್ನು ಬರಮಾಡಿಕೊಳ್ಳಲು ಅವರಿಗೆ ಅವಕಾಶ ಇರಲಿಲ್ಲ. ಬಿಜೆಪಿ ರಾಜ್ಯ ನಾಯಕರಿಗೆ ಬೀದಿಗೆ ಬೀಳುವಂತ ಪರಿಸ್ಥಿತಿ ಬಂದಿದೆ. ಈಗಿನ ಬಿಜೆಪಿ ಪಕ್ಷ ದಿನದಿಂದ ದಿನಕ್ಕೆ ಅದೋಗತಿಗೆ ಹೋಗ್ತಾ ಇದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News