ವಂಚನೆ ಪ್ರಕರಣ: ಅಭಿನವ ಹಾಲಶ್ರೀ 2 ದಿನ ಮುಂಡರಗಿ ಪೊಲೀಸರ ಕಸ್ಟಡಿಗೆ

Update: 2023-10-03 16:51 GMT

ಮುಂಡರಗಿ (ಗದಗ): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಮಂಗಳವಾರ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

 ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಅಭಿನವ ಹಾಲಶ್ರೀ ಅವರನ್ನು ಸ್ಥಳೀಯ ಪೊಲೀಸರು ಪಟ್ಟಣಕ್ಕೆ ಕರೆತಂದಿದ್ದರು. ಸಂಜೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ದಿನ ಸ್ಥಳೀಯ ಪೊಲೀಸರ ವಶಕ್ಕೆ ಒಪ್ಪಿಸಿದರು. ಬಳಿಕ ತಾಲೂಕಾಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಲಾಯಿತು.

ಅಭಿನವ ಹಾಲಶ್ರೀಗಳು ಶಿರಹಟ್ಟಿ ಮೀಸಲು ಮತಕ್ಷೇತ್ರದ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ. ಶ್ರೀಗಳಿಗೆ 10 ಲಕ್ಷ ರೂ., 40 ಲಕ್ಷ ರೂ. ಹಾಗೂ 50 ಲಕ್ಷ ರೂ.ನಂತೆ ಒಟ್ಟು 1 ಕೋಟಿ ರೂಪಾಯಿ ನೀಡಿರುವುದಾಗಿ ಅಮಾನತಿನಲ್ಲಿರುವ ಪಿಡಿಒ ಸಂಜಯ ಚವಡಾಳ ಸೆ.18ರಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೆ.25ರಂದು ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News