ವಂಚನೆ ಪ್ರಕರಣ: ‘ಬಿಟಿವಿ’ ಸುದ್ದಿವಾಹಿನಿ ಎಂ.ಡಿ. ಕುಮಾರ್ ಬಂಧನ

Update: 2023-11-26 05:24 GMT

ಜಿ.ಎಂ. ಕುಮಾರ್

ಬೆಂಗಳೂರು, ನ.26: ವಂಚನೆ ಪ್ರಕರಣವೊಂದಕ್ಕೆ ಬಂಧಿಸಿ ‘ಬಿಟಿವಿ’ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಜಿ.ಎಂ. ಕುಮಾರ್ ಅವರನ್ನು ಶನಿವಾರ ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕುಮಾರ್ ರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕುಮಾರ್ ವಿರುದ್ಧ ಅಶ್ವಿನ್ ಮಹೇಂದ್ರ ಎಂಬವರು 2022ರಲ್ಲಿ ವಿಜಯನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು.

ದೂರುದಾರ ಅಶ್ವಿನ್ ಮಹೇಂದ್ರ ಹಾಗೂ ಕುಮಾರ್ ಇಬ್ಬರೂ ಪಾಲುದಾರಿಕೆಯಲ್ಲಿ 'ಈಗಲ್ ಸೈಟ್ ಮೀಡಿಯಾ ಕಂಪೆನಿ' ಎಂಬ ಸಂಸ್ಥೆಯನ್ನು ಆರಂಭಿಸಿದ್ದು, ಇಬ್ಬರೂ ಅದರ ನಿರ್ದೇಶಕರಾಗಿದ್ದರು. ಆದರೆ ಅಶ್ವಿನ್ ಅವರ ದಾಖಲಾತಿಗಳನ್ನು ಆರೋಪಿ ಕುಮಾರ್ ದುರ್ಬಳಕೆ ಮಾಡಿಕೊಂಡು ಬ್ಯಾಂಕ್ಗಳಲ್ಲಿ ಖಾತೆ ತೆರೆದು ಕೋಟಿ ರೂ.ಗೂ. ಅಧಿಕ ಹೆಚ್ಚು ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಕುಮಾರ್, ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ನ್ಯಾಯಾಲಯ, ಇತ್ತೀಚೆಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News