ಬಿಜೆಪಿ ಟಿಕೆಟ್ ಹೆಸರಿನಲ್ಲಿ ವಂಚನೆ ಪ್ರಕರಣ : ಬಿಗ್‍ಬಾಸ್ ಸೆಟ್‍ನಿಂದ ಕೋರ್ಟ್‍ಗೆ ಬಂದ ಚೈತ್ರಾ

Update: 2024-12-03 12:24 GMT

PC : X

ಬೆಂಗಳೂರು : ಬಿಜೆಪಿ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ನಂಬಿಸಿ ಹಣ ಪಡೆದು ವಂಚನೆಗೈದಿರುವ ಆರೋಪ ಎದುರಿಸುತ್ತಿರುವ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಅವರು, ಕಿರುತೆರೆಯ ಬಿಗ್‍ಬಾಸ್ ಸೀಸನ್- 11ರ ಸೆಟ್‍ನಿಂದಲೇ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತ್ತು.

ನೋಟಿಸ್ ಬಂದ ಹಿನ್ನೆಲೆ ಸ್ಪರ್ಧಿಯಾಗಿರುವ ಬಿಗ್‍ಬಾಸ್ ಮನೆಯಿಂದ ಹೊರಬಂದ ಚೈತ್ರಾ, ಸೋಮವಾರ ನಗರದ 1ನೆ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ ತೆರಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News