ಬಿಎಸ್‌ವೈ ವಿರುದ್ಧದ ಪೊಕ್ಸೋ ಪ್ರಕರಣ | ತಡೆಯಾಜ್ಞೆ ತೆರವುಗೊಳಿಸುತ್ತೇವೆ : ಜಿ.ಪರಮೇಶ್ವರ್

Update: 2024-08-10 13:30 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೊಕ್ಸೋ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಅಡ್ವೋಕೇಟ್ ಜನರಲ್‍ಗೆ ತಿಳಿಸಲಾಗಿದೆ. ಆನಂತರ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಶನಿವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ನಾಯಕರ ಬೇರೆ ಬೇರೆ ಪ್ರಕರಣಗಳ ಕುರಿತು ತನಿಖೆ ಆಗುತ್ತಿದೆ. ದೇವರಾಜು ಅರಸು ಟ್ರಕ್ ಟರ್ಮಿನಲ್‍ನಲ್ಲಿ 47 ಕೋಟಿ ರೂ. ಚೆಕ್ ಮೂಲಕ ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ಬಳಿಕ ದ್ವೇಷದ ರಾಜಕಾರಣ ಪ್ರಾರಂಭವಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಾರ್ವಜನಿಕ ಜೀವನದಲ್ಲಿ ವೈಯಕ್ತಿಕ ಟೀಕೆಗಳ ಮಾತುಗಳು ಬರಬಾರದು. ಆಡಳಿತ ಮಾಡುವವರ ಬಗ್ಗೆ ಜನ ಬೇರೆ ವಿಚಾರಗಳನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಅದನ್ನು ಮೀರಿ ಹೋದಾಗ ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News