ನಕ್ಸಲ್ ಚಟುವಟಿಕೆ ನಿಯಂತ್ರಣದ ವಿಚಾರದಲ್ಲಿ ಪಕ್ಷದ ಪ್ರಶ್ನೆಯೇ ಇಲ್ಲ : ಜಿ.ಪರಮೇಶ್ವರ್

Update: 2024-11-20 13:27 GMT

ಡಾ.ಜಿ.ಪರಮೇಶ್ವರ್

ಬೆಂಗಳೂರು : ʼನಕ್ಸಲ್ ಚಟುವಟಿಕೆ ನಿಯಂತ್ರಣ ವಿಚಾರದಲ್ಲಿ ಬಿಜೆಪಿ, ಕಾಂಗ್ರೆಸ್ ಎನ್ನುವ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆಯೇ ಮುಖ್ಯʼ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಎನ್‍ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂದು ಕೆಲವರ ಹೇಳಿಕೆ ನೀಡಿದ್ದಾರೆ. ಆದರೆ, ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆʼ ಎಂದು ತಿಳಿಸಿದರು.

ʼನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ. ಆತನ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆತನ ಬಳಿ ಆಟೊಮ್ಯಾಟಿಕ್ ಮಷಿನ್ ಗನ್ ಸಹ ಇತ್ತುʼ ಎಂದು ಅವರು ಹೇಳಿದರು.

ʼಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ವಿಕ್ರಂಗೌಡನ ಸಂಬಂಧಿಕರೂ ಶರಣಾಗುವಂತೆ ಹೇಳಿದ್ದರು. ಆದರೆ, ವಿಕ್ರಂಗೌಡ ಒಪ್ಪಿರಲಿಲ್ಲ. ಕಾರ್ಕಳದಲ್ಲಿ ಎಎನ್‍ಎಫ್ ಹೆಡ್‍ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆʼ ಎಂದು ಪರಮೇಶ್ವರ್ ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News