ಗಾಂಧಿ ಜಯಂತಿ | ಸಿಎಂ ಸಿದ್ದರಾಮಯ್ಯರಿಂದ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ
ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಗಾಂಧೀಜಿ ಅಧ್ಯಕ್ಷತೆಗೆ 100 ವರ್ಷಗಳ ಸಂಭ್ರಮ ಹಿನ್ನೆಲೆ ಹಾಗೂ 155ನೇ ಗಾಂಧಿ ಜಯಂತಿ ಅಂಗವಾಗಿ ಬೆಂಗಳೂರಿನ ಕುಮಾರಕೃಪ ರಸ್ತೆಯ ಗಾಂಧಿ ಭವನದಲ್ಲಿ ಬುಧವಾರ ಬೆಳಗ್ಗೆ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು.
ಬಳಿಕ ‘ಗಾಂಧಿ ನಡಿಗೆ’ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ತೆರಳಿ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಕಿತ್ತೂರು ಉತ್ಸವದ ಅಂಗವಾಗಿ ಕಿತ್ತೂರು ರಾಣಿ ಚನ್ನಾಮ್ಮ ಅವರ ಪ್ರತಿಮೆಗೂ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಎಚ್.ಕೆ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.