"ಕಲೆಕ್ಷನ್‌ ಕೊಡಿ, ನಿಗಮ-ಮಂಡಳಿ ಅಧಿಕಾರ ಪಡಿ" : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಟೀಕೆ

Update: 2023-11-22 08:53 GMT

Photo : x/@BJP4Karnataka

ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರ ನಿಗಮ-ಮಂಡಳಿ ಅಧ್ಯಕ್ಷ  ಸ್ಥಾನ ಅಯ್ಕೆ ಸಂಬಂಧ ಅಂತಿಮ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ತನ್ನ X  ಖಾತೆಯಲ್ಲಿ ರಾಜ್ಯದಲ್ಲಿ ಕಲೆಕ್ಷನ್‌ ದಂಧೆಯ ಹರಾಜು ಪಟ್ಟಿ ಎಂಬ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ರಾಜ್ಯ ಸರಕಾರವನ್ನು ಟೀಕಿಸಿದೆ.

ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿಗೆ ಅಂತಿಮ ಬಹುತೇಕ ಅಂತಿಮವಾಗಿದ್ದು, ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸಭೆ ನಡೆದಿದೆ . ಸಂಬಾವ್ಯಯರ  ಪಟ್ಟಿ ಸಿದ್ಧವಾಗಿದೆ ಎನ್ನಲಾಗಿದೆ. ಹಿರಿಯ ಶಾಸಕರಿಗೆ ದೂರವಾಣಿ ಕರೆ ಮಾಡಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡುತ್ತಿದ್ದು, ಮೊದಲು ನಿಗಮ, ಮಂಡಳಿ ಸ್ಥಾನ ವಹಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

 ಈ ಬಗ್ಗೆ ಕಾಂಗ್ರೆಸ್‌ ಕಾಲೆಳೆದಿರುವ ಬಿಜೆಪಿ  " ಈಗಾಗಲೇ ವರ್ಗಾವಣೆಯನ್ನು ಫೋನ್‌ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿದ್ದರಾಮಯ್ಯನವರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಸುರ್ಜೆವಾಲ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮವಾಗಿ ನಿಗಮ ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ " ಎಂದು ರಾಜ್ಯ ಬಿಜೆಪಿ ತನ್ನ X ಪೋಸ್ಟ್‌ ನಲ್ಲಿ ಕಾಂಗ್ರೆಸ್‌ ಸರಕಾರವನ್ನು ಟೀಕಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News