ಕರ್ನಾಟಕಕ್ಕೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ನೀಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

Update: 2023-07-30 18:34 GMT

ಸಾಂದರ್ಭಿಕ ಚಿತ್ರ (credit: eastmojo.com)

ಬೆಂಗಳೂರು: ‘ಮಣಿಪುರ ರಾಜ್ಯದಲ್ಲಿನ ಪ್ರಸ್ತುತ ಪ್ರಕ್ಷುಬ್ದ ಪರಿಸ್ಥಿತಿಯಿಂದಾಗಿ ಕರ್ನಾಟಕಕ್ಕೆ ಬರುವ ಮಣಿಪುರದ ವಿದ್ಯಾರ್ಥಿಗಳಿಗೆ ಸರಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ನೀಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಣಿಪುರದ ವಿದ್ಯಾರ್ಥಿಗಳ ಶಾಲಾ ದಾಖಲಾತಿಗಾಗಿ ಅವಶ್ಯ ದಾಖಲೆ, ಪ್ರಮಾಣ ಪತ್ರ, ವರ್ಗಾವಣೆ ಪತ್ರ ಹಾಗೂ ಇನ್ನಿತರೆ ಶಾಲೆಗೆ ಸಂಬಂಧಿಸಿದ ದಾಖಲೆಗಳು ಲಭ್ಯವಿಲ್ಲದಿದ್ದಲ್ಲಿ, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ದಾಖಲಾತಿಯನ್ನು ನೀಡಬೇಕು ಎಂದು ತಿಳಿಸಿದೆ.

ದಾಖಲಾತಿಯನ್ನು ಮಾಡಿಕೊಳ್ಳುವಾಗ ಜನನ ಪ್ರಮಾಣ ಪತ್ರ, ವರ್ಗಾವಣೆ ಪತ್ರ ಅಥವಾ ಯಾವುದೇ ದಾಖಲೆಗಳು ನೀಡುವಂತೆ ಒತ್ತಾಯಿಸಬಾರದು. ವಿದ್ಯಾರ್ಥಿ ಅಥವಾ ಪಾಲಕರಿಂದ ಸ್ವಯಂ ದೃಢೀಕರಣ ಪತ್ರವನ್ನು ಪಡೆದು ವಿದ್ಯಾರ್ಥಿಯು ಹಿಂದಿನ ಶಾಲೆಯಲ್ಲಿ ಯಾವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುತ್ತಾರೆಯೋ ಅದೇ ತರಗತಿಗಳಿಗೆ ದಾಖಲಾತಿ ಮಾಡಿಕೊಳ್ಳಲು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News