ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ | ರನ್ಯಾ ರಾವ್ ಜಾಮೀನು ಅರ್ಜಿ ವಜಾ

ರನ್ಯಾ ರಾವ್
ಬೆಂಗಳೂರು : ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿ ಆದೇಶಿದೆ.
ಜಾಮೀನು ಕೋರಿ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ 64ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಹಿಂದೆ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿತ್ತು. ಈಗ ಸೆಷನ್ಸ್ ನ್ಯಾಯಾಲಯವೂ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇನ್ನು ರನ್ಯಾ ರಾವ್ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.
ಜಾಮೀನು ಅರ್ಜಿ ವಜಾಗೆ ಕಾರಣಗಳು :
ರನ್ಯಾ ರಾವ್ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಲಿಂಕ್ ಗಳು ಇವೆ. ಕಸ್ಟಮ್ಸ್ ಬ್ಯಾಗೇಜ್ ನಿಯಮ ಉಲ್ಲಂಘನೆ ಮಾಡಲಾಗಿದೆ. ಹೊರ ಬಂದಲ್ಲಿ ಸಾಕ್ಷಿನಾಶ ಮತ್ತು ತನಿಖೆಯ ದಾರಿತಪ್ಪಿಸಿ ಸಾಧ್ಯತೆ ಇದೆ. ರನ್ಯಾ ರಾವ್ ಒಂದು ವರ್ಷದ ಅವಧಿಯಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿದ್ದಾರೆ. ಪ್ರಭಾವಿ ಆಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ.