ರಾಜ್ಯದಲ್ಲಿ ಮುಂದಿನ 2 ದಿನ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
Update: 2023-09-26 15:26 GMT
ಬೆಂಗಳೂರು, ಸೆ.26: ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಸೆ.27, 28ರಂದು ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ತಿಳಿಸಿದೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24ಗಂಟೆ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ತೊಂಡೇಭಾವಿಯಲ್ಲಿ 5 ಸೆಂ.ಮೀ, ಉತ್ತರ ಕನ್ನಡದ ಗೋಕರ್ಣ, ವಿಜಯಪುರದ ಸಿಂದಗಿ, ಬೀದರ್, ಬಳ್ಳಾರಿಯ ಕಂಪ್ಲಿಯಲ್ಲಿ 4 ಸೆಂ.ಮೀ ಮಳೆಯಾಗಿದೆ.