ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರಕಾರದ ವತಿಯಿಂದ ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ: ಸಿಎಂ ಸಿದ್ದರಾಮಯ್ಯ

Update: 2023-08-24 08:32 GMT

(ಗುರುವಾರ ಸಿಎಂ ಸಿದ್ದರಾಮಯ್ಯ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಅವರು, ʼʼವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸನ್ಮಾನಿಸಿ, ಗೌರವಿಸುತ್ತೇವೆʼʼ ಎಂದು ತಿಳಿಸಿದ್ದಾರೆ. 

ʼʼಭಾರತೀಯ ವಿಜ್ಞಾನಿಗಳ ಸಾಧನೆಯಿಂದ ಇಡೀ ವಿಶ್ವವೇ ಇಂದು ಬೆಂಗಳೂರಿನ ಇಸ್ರೋ ಸಂಸ್ಥೆಯ ಕಡೆಗೆ ಬೆರಗುಗಣ್ಣಿನಿಂದ ನೋಡುತ್ತಿದೆ. ನಿನ್ನೆಯ ಚಂದ್ರಯಾನ-3 ರ ಯಶಸ್ಸಿನಿಂದಾಗಿ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ಇಂತಹ ಐತಿಹಾಸಿಕ ಸಾಧನೆಗೈದ ಕನ್ನಡ ನೆಲದಲ್ಲಿರುವ ಇಸ್ರೋ ಸಂಸ್ಥೆ ನಮ್ಮೆಲ್ಲರ ಹೆಮ್ಮೆʼʼ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News