‘ನಕ್ಸಲ್ ಪುನರ್ವಸತಿ ಸಮಿತಿ’ ಪುನರ್ ರಚಿಸಿ ಸರಕಾರ ಆದೇಶ

Update: 2024-03-24 14:18 GMT

ಬೆಂಗಳೂರು: ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿ ಶರಣಾದ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರಲು ರಾಜ್ಯ ಮಟ್ಟದ ಸಮಿತಿಯನ್ನು ರಾಜ್ಯ ಸರಕಾರ ಪುನರ್ ರಚಿಸಿ ಆದೇಶ ಹೊರಡಿಸಿದೆ.

ಸರಕಾದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿಗೆ ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ಹಿರಿಯ ಪತ್ರಕರ್ತ ಬಿ.ಪಾರ್ವತೀಶ, ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ. ನಕ್ಸಲ್ ನಿಗ್ರಹ ದಳದ ಎಡಿಜಿಪಿ ಸಂಚಾಲಕರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಒಳಾಡಳಿತ ಇಲಾಖೆ ಕಾರ್ಯದರ್ಶಿ, ಪೊಲೀಸ್ ಮಹಾ ನಿರ್ದೇಶಕ, ರಾಜ್ಯ ಗುಪ್ತವಾರ್ತೆ ನಿರ್ದೇಶಕ, ಉಪ ನಿರ್ದೇಶಕ, ಆಂತರಿಕ ಭದ್ರತಾ ವಿಭಾಗದ ಮುಖ್ಯಸ್ಥರು ಪದ ನಿಮಿತ್ತ ಸದಸ್ಯರಾಗಿರುತ್ತಾರೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ನಾಗರಾಜು ಎಸ್. ಆದೇಶದಲ್ಲಿ ತಿಳಿಸಿದ್ದಾರೆ.

ಶರಣಾಗತ ನಕ್ಸಲರಿಗೆ ಸಹಾಯಧನ: ಶರಣಾಗತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವ ನಕ್ಸಲರಿಗೆ ಸಹಾಯಧನ ಹಾಗೂ ಪುನರ್ವಸತಿ ಸೌಲಭ್ಯ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಇಂತಹ ಪ್ರೋತ್ಸಾಹದಿಂದಾಗಿ ಭೂಗತರಾಗಿದ್ದ ಮಹಿಳೆಯರನ್ನೂ ಒಳಗೊಂಡಂತೆ 14 ಜನ ನಕ್ಸಲರು ಸರಕಾರ ಮುಂದೆ ಈವರೆಗೆ ಶರಣಾಗತರಾಗಿದ್ದಾರೆ. ಆಯಾ ಜಿಲ್ಲಾಡಳಿತ ಇವರುಗಳ ಪುನರ್ವಸತಿಗಾಗಿ ಧನಾತ್ಮಕವಾಗಿ ಮತ್ತು ಪರಿಣಾಮಕಾರಿಯಾಗಿ ಸ್ಪಂದಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News