ಖಾಸಗಿ ಸಂಸ್ಥೆಗಳ ಎಫ್‌ ಎಸ್‌ ಎಲ್ ವರದಿಗಳಿಗೆ ಸರ್ಕಾರ ಮಾನ್ಯತೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

Update: 2024-03-06 07:23 GMT

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ ಎಫ್‌ ಎಸ್‌ ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆಯ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯು ಖಾಸಗಿ ಸಂಸ್ಥೆಯೊಂದರ ಎಫ್‌ ಎಸ್‌ ಎಲ್ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿರುವ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಖಾಸಗಿ ಸಂಸ್ಥೆ ನೀಡುವ ಎಫ್‌ ಎಸ್‌ ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ  ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News