ಸರಕಾರಿ ‘ನೇಮಕಾತಿ ಪರೀಕ್ಷಾ ಅಕ್ರಮಗಳ ತಡೆ’ಗೆ ನೂತನ ಮಸೂದೆ: ಸಿಎಂ ಸಿದ್ದರಾಮಯ್ಯ

Update: 2023-11-17 15:04 GMT

ಬೆಂಗಳೂರು, ನ.17: ಕರ್ನಾಟಕ ಪಬ್ಲಿಕ್ ಎಗ್ಸಾಮಿನೇಷನ್(ಭ್ರಷ್ಟಾ ಚಾರ ಮತ್ತು ಅಕ್ರಮ ವಿಧಾನಗಳ ತಡೆಗಟ್ಟುವಿಕೆ ಕ್ರಮಗಳು)ವಿಧೇಯಕ–2023ಕ್ಕೆ ನಿನ್ನೆ(ಗುರುವಾರ) ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಈ ವಿಧೇಯಕವನ್ನು ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಎಕ್ಸ್(ಟ್ವಿಟ್ಟರ್)ನಲ್ಲಿ ಪೋಸ್ಟ್ ಹಾಕಿರುವ ಅವರು, ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಪಿಎಸ್‍ಐ, ಸಹಾಯಕ ಪ್ರಾಧ್ಯಾಪಕರ ಹುದ್ದೆ, ಎಫ್‍ಡಿಎ ಸೇರಿದಂತೆ ಸರಕಾರದ ಹಲವು ನೇಮಕಾತಿಗಳಲ್ಲಿ ವ್ಯಾಪಕವಾಗಿ ಅಕ್ರಮಗಳು ನಡೆದಿದ್ದವು. ಇದರಿಂದ ವμರ್Áನುಗಟ್ಟಲೆಯಿಂದ ಪರೀಕ್ಷೆಗೆ ತಯಾರಿ ನಡೆಸಿ, ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ್ದ ಸಾವಿರಾರು ಅಭ್ಯರ್ಥಿಗಳು ಉದ್ಯೋಗದಿಂದ ವಂಚಿತರಾಗಿದ್ದರು ಎಂದು ಹೇಳಿದ್ದಾರೆ.

ಇಂತಹ ಅಕ್ರಮ, ಅವ್ಯವಹಾರವನ್ನು ತಡೆಗಟ್ಟಿ, ಅರ್ಹರಿಗೆ ಸರಕಾರಿ ಉದ್ಯೋಗಗಳು ದೊರಕುವಂತೆ ಮಾಡಲು ಕಟ್ಟುನಿಟ್ಟಿನ ಪರೀಕ್ಷಾ ವಿಧಾನ, ಪಾರದರ್ಶಕ ನೇಮಕಾತಿ ಪ್ರಕ್ರಿಯೆಯ ಅಳವಡಿಕೆ ಮಾಡಲು ನೂತನ ಮಸೂದೆಯನ್ನು ಜಾರಿಗೆ ತರಲು ಉದ್ದೇಶಿಸಿದ್ದೇವೆ. ಇದರ ಮೊದಲ ಹಂತವಾಗಿ ವಿಧೇಯಕವನ್ನು ಸಚಿವ ಸಂಪುಟದ ಮುಂದಿಟ್ಟು ಅನುಮೋದನೆಯನ್ನು ಪಡೆದಿದ್ದೇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದμÉ್ಟೀ ಅಲ್ಲ, ಅರ್ಹರಿಗೆ ಮಾತ್ರ ಉದ್ಯೋಗ ಸಿಗಬೇಕು ಎಂಬುದೂ ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News