ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೋವಿಡ್ ಪಾಸಿಟಿವ್
Update: 2024-01-09 12:51 GMT
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ತಿಳಿಸಿದ್ದಾರೆ.
ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ನಿರಂತರವಾಗಿ ನಿಗಾವಹಿಸಿದ್ದಾರೆ. ರಾಜಭವನದಲ್ಲೆ ಅವರು ಕ್ವಾರಂಟೈನ್ ನಲ್ಲಿರುವುದರಿಂದ, ಅವರ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಮುಂದಿನ ಸೂಚನೆವರೆಗೆ ರದ್ದುಪಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.