ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ; ಹೈಕೋರ್ಟ್ ಮೊರೆ‌ ಹೋದ ಸಿಎಂ ಸಿದ್ದರಾಮಯ್ಯ

Update: 2024-08-19 05:45 GMT

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ‌ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ  ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ಗೆ  ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ  ಮನವಿ ಮಾಡಲಾಗಿದೆ.

 ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ.ಸಚಿವ ಸಂಪುಟದ ಶಿಫಾರಸಿಗೆ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163 ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು.ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಆರೋಪಿಸಲಾಗಿದೆ.

ಸಿಎಂ ಪರ ವಕೀಲರು ಇಂದೇ ತುರ್ತು ವಿಚಾರಣೆಗೆ ಮನವಿ ಮಾಡಿದ್ದು, . ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ್ದಾರೆ.

ತುರ್ತು ವಿಚಾರಣೆಯ ಅಗತ್ಯವಿದೆ. ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದು ಹೈಕೋರ್ಟ್ ಗೆ ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ನ್ಯಾಯಾಲಯದ ಮುಂದೆ ಮನವಿ ಮಾಡಿದರು. ಮನವಿ ಮಾನ್ಯ ಮಾಡಿದ ಹೈಕೋರ್ಟ್ ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಲು ಒಪ್ಪಿಗೆ‌ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News