ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್​ಐಟಿ ರಚಿಸಿದ ಸರ್ಕಾರ

Update: 2024-09-21 12:38 GMT

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ಎಡಿಜಿಪಿ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗುತ್ತಿಗೆದಾರ ಚೆಲುವರಾಜು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಆಡಿಯೋ ಬಹಿರಂಗವಾದ ಬಳಿಕ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಮಹಿಳೆಯೊಬ್ಬರು ಅತ್ಯಾಚಾರದ ಆರೋಪದಲ್ಲಿ ಮುನಿರತ್ನ ವಿರುದ್ಧ ದೂರು ದಾಖಲಿಸಿದ್ದರು.

ಈ ಸಂಬಂಧ ಬೆಂಗಳೂರು ನಗರದ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣ ಹಾಗೂ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ತನಿಖೆ ಮಾಡಲು ಸರಕಾರವು ಸಿಐಡಿಯ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ.

ಎಡಿಜಿಪಿ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದ್ದು, ಐಜಿಪಿ ಲಾಭುರಾಮ್, ಎಸ್ಪಿ ದರ್ಜೆಯ ಅಧಿಕಾರಿಗಳಾದ ಸೌಮ್ಯಲತ. ಸಿ.ಎ.ಸೈಮನ್ ಅವರು ತನಿಖಾ ತಂಡದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News