ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆಯನ್ನು ಸರಕಾರ ಲಘುವಾಗಿ ಪರಿಗಣಿಸಬಾರದು: ಎಚ್.ಡಿ ಕುಮಾರಸ್ವಾಮಿ

Update: 2023-12-01 10:24 GMT

ಬೆಂಗಳೂರು: ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಒದಗಿಸಿಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, "ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು" ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ʼರಾಜ್ಯ ಕಾಂಗ್ರೆಸ್‌ ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು. ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದುʼ ಎಂದು ಬರೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News