ವಕ್ಫ್ ಆಸ್ತಿ | ಬಿಜೆಪಿಯಿಂದ ಸಮಾಜದ ಶಾಂತಿ ಕದಡುವ ಯತ್ನ : ಜಿ.ಪರಮೇಶ್ವರ್

Update: 2024-11-16 16:11 GMT

ಜಿ.ಪರಮೇಶ್ವರ್ 

ಬೆಂಗಳೂರು: ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ವಕ್ಫ್ ಆಸ್ತಿ ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿಯಿಂದ ಸಮಾಜದ ಶಾಂತಿ ಕದಡುವ ಯತ್ನ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ಸಮಾಜದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಅದರಲ್ಲೂ ಒಡೆದು ಅಳುವ ನೀತಿ ಅಳವಡಿಸಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಮಾಜದ ಸ್ವಾಸ್ಥ್ಯ ಕಳೆಯುವುದು ಸರಿಯಲ್ಲ. ಅವರ ಆರೋಪಗಳಿಗೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕೊಡುತ್ತೇವೆ ಎಂದ ಅವರು, ಮೊದಲು ಬಿಜೆಪಿಯವರು ಅವರ ಆಂತರಿಕ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲಿ. ಅದು ಅವರ ಪಕ್ಷಕ್ಕೂ ಒಳ್ಳೆಯದು, ನಮಗೂ ಒಳ್ಳೆಯದು ಎಂದು ಸಲಹೆ ನೀಡಿದರು.

ಸಂಸತ್‍ನಲ್ಲಿ ಕೋವಿಡ್ ಹಗರಣ ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿ, ‘ಸಂಸದರು ಹಗರಣದಲ್ಲಿ ಭಾಗಿಯಾಗಿದ್ದು, ಈ ಸಂಬಂಧಿಸಿದಂತೆ ಚರ್ಚೆ ಮಾಡಿದರೆ ಉತ್ತರ ಸಿಗುತ್ತದೆ. ಅಲ್ಲೆ ಪ್ರಸ್ತಾಪ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರಕಾರ ಕೂಡ ಕೋವಿಡ್ ವೇಳೆ ಹಣ ಕೊಟ್ಟಿತ್ತು. ಹಾಗಾಗಿ ಅಲ್ಲಿ ಚರ್ಚೆಯಾದರೆ ರಾಷ್ಟ್ರದ ಗಮನ ಸೆಳೆಯುತ್ತೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News