ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ : ಜಿ.ಪರಮೇಶ್ವರ್

Update: 2025-04-29 17:47 IST
ಮಂಗಳೂರು ಗುಂಪು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ : ಜಿ.ಪರಮೇಶ್ವರ್

 ಡಾ.ಜಿ.ಪರಮೇಶ್ವರ್

  • whatsapp icon

ಬೆಂಂಗಳೂರು : ಮಂಗಳೂರಿನ ಗುಂಪು ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗಾಗಲೇ 12 ಜನ ಆರೋಪಿಗಳನ್ನು ಬಂಧಿಸಿಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, ವ್ಯಕ್ತಿಯೋರ್ವನ ಗುಂಪು ಹತ್ಯೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದೆ. ಸಂತ್ರಸ್ತನ ಗುರುತು ಪತ್ತೆ ಹಚ್ಚಲಾಗಿಲ್ಲ. ಸ್ಥಳೀಯವಾಗಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯದ ವೇಳೆ ಆತ ‘ಪಾಕಿಸ್ತಾನ್ ಝಿಂದಾಬಾದ್’ ಎಂದು ಕೂಗಿದ್ದಾನೆ ಎನ್ನಲಾಗಿದ್ದು, ಈ ಕಾರಣಕ್ಕೆ ಆತನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ಆತ ಮೃತಪಟ್ಟಿರಲಿಲ್ಲ. ಆ ಬಳಿಕ ಆತ ಮೃತಪಟ್ಟಿದ್ದಾನೆ. ಈ ಕುರಿತು ಹೆಚ್ಚಿನ ಮಾಹಿತಿ ನನಗೆ ಸಿಗಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿ 10 ರಿಂದ 12 ಜನರನ್ನು ಬಂಧಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ರಾಜ್ಯದ ಎಲ್ಲೂ ಇಂತಹ ಘಟನೆಗಳು ನಡೆಯಬಾರದು. ಅವರು ಏನೇ ಹೇಳಿರಲಿ, ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿದ್ದಾರೆ. ಯಾರೂ ಈ ಬಗ್ಗೆ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ತನಿಖೆ ನಡೆಸದೆ ಹೇಳಲು ಸಾಧ್ಯವಿಲ್ಲ. ಆದ್ದರಿಂದ ಸಾರ್ಜನಿಕರಲ್ಲಿ ಶಾಂತಿ ಕಾಪಾಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News