ಗ್ರಾಮ ಪಂಚಾಯತ್ | ಸಾಮಾನ್ಯ ವರ್ಗದ ಸದಸ್ಯಗೆ ಮೀಸಲಾತಿಯಡಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ: ಹೈಕೋರ್ಟ್

Update: 2023-11-10 17:04 GMT

ಬೆಂಗಳೂರು, ನ. 10: ಸಾಮಾನ್ಯ ವರ್ಗದಿಂದ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾದ ವ್ಯಕ್ತಿ, ಸರಕಾರ ಮೀಸಲು ನಿಗದಿ ಪಡಿಸಿದ ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯಡಿ ಸ್ಪರ್ಧೆ ಮಾಡಬಹುದು ಎಂದು ಹೈಕೋರ್ಟ್ ತಿಳಿಸಿದೆ.

ತುಮಕೂರಿನ ಚೈತ್ರಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಗ್ರಾಮ ಪಂಚಾಯತ್ ಕಾಯ್ದೆ ಸೆಕ್ಷನ್ 5ರ ಅಡಿ ಸದಸ್ಯರ ಆಯ್ಕೆಗೆ ಒದಗಿಸಲಾದ ಮೀಸಲಾತಿಯು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರಿಗೆ ಪರಿಗಣನೆಗೆ ಬರುವುದಿಲ್ಲ. ಅಲ್ಲದೇ, ಸೆಕ್ಷನ್ 44ರ ಅಡಿಯಲ್ಲಿ ಉಲ್ಲೇಖಿಸಿರುವಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳಿಗೆ ಅರ್ಹರು ಇಲ್ಲದಿದ್ದಲ್ಲಿ ಜನಸಂಖ್ಯಾ ಆಧಾರದಲ್ಲಿ ಮೀಸಲು ಹುದ್ದೆಗಳನ್ನು ಇತರ ಜನಾಂಗದವರಿಗೆ ನೀಡಬಹುದಾಗಿದೆ ಎಂದು ಪೀಠ ಹೇಳಿದೆ.

ಇನ್ನೂ, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಸೆಕ್ಷನ್ 5ರ ಅಡಿಯಲ್ಲಿ ಮೀಸಲು ನೀಡುವುದಕ್ಕೆ ಅವಕಾಶವಿದೆ. ಈ ಕಾಯ್ದೆಯ ಸೆಕ್ಷನ್ 44 ವಿಭಿನ್ನವಾಗಿದೆ. ಸೆಕ್ಷನ್ 5ರ ಅಡಿ ಸಾಮಾನ್ಯ ವರ್ಗದಲ್ಲಿ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡಿ ಸೆಕ್ಷನ್ 44ರ ಅಡಿ ಮೀಸಲು ವರ್ಗದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದಕ್ಕೆ ಅಡ್ಡಿಯಾಗುವುದಿಲ್ಲ ಎಂದು ಪೀಠ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News