ʼಗೃಹಲಕ್ಷ್ಮಿʼ ಯೋಜನೆ: ಇದುವರೆಗೆ 1.10 ಕೋಟಿ ಮಹಿಳೆಯರಿಂದ ನೋಂದಣಿ

Update: 2023-08-28 07:57 GMT

ಬೆಂಗಳೂರು: ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದುವರೆಗೂ 1.10 ಕೋಟಿಗೂ ಅಧಿಕ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. 

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼಜನರಿಗಾಗಿ ರಚನಾತ್ಮಕ ಕೆಲಸ ಮಾಡಲು ಸಾಧ್ಯವಿರುವುದು ಕಾಂಗ್ರೆಸ್ಸಿಗೆ ಮಾತ್ರ. ಜನತೆಯ ಬದುಕಿನ ಭಾರವನ್ನು ಇಳಿಸುವಲ್ಲಿ ನಮ್ಮ ಎಲ್ಲ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುತ್ತವೆʼʼ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಇನ್ನು 'ಗೃಹಲಕ್ಷ್ಮಿ' ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ. ರಾಹುಲ್ ಗಾಂಧಿ ಅವರ ಉಪಸ್ಥಿತಿಯಲ್ಲಿ, ಗೃಹಲಕ್ಷ್ಮಿ ಕಾರ್ಯಕ್ರಮವನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News