ಆ.1 ರಿಂದ ‘ಗೃಹಜ್ಯೋತಿ’ ಯೋಜನೆ ಆರಂಭ; ಇಲ್ಲಿದೆ ಮಾಹಿತಿ

Update: 2023-07-29 13:58 GMT

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಆಗಸ್ಟ್ ಒಂದರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಸೆಪ್ಟೆಂಬರ್ ತಿಂಗಳಿನಿಂದ ಶೂನ್ಯ ವಿದ್ಯುತ್ ಬಿಲ್ ಬರಲಿದೆ.

ಜುಲೈ 25ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಉಚಿತ ವಿದ್ಯುತ್‍ನ ಲಾಭ ದೊರೆಯಲಿದೆ. ಇನ್ನೂ, ಗೃಹಜ್ಯೋತಿ ಯೋಜನೆಗೆ 1,18,50,474 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಶೇ.40ರಷ್ಟು ಗ್ರಾಹಕರು ಅರ್ಜಿ ಸಲ್ಲಿಸಲು ಬಾಕಿ ಉಳಿದಿದೆ. ಆದರೂ, ಜುಲೈ 25ರ ನಂತರ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸೆಪ್ಟೆಂಬರ್ ತಿಂಗಳಲ್ಲಿ ಸಿಗಲಿದೆ.

ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಟ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News