ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2024-01-31 10:49 GMT

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು.

ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು  ಮುಂದುವರೆಸಲಾಗುವುದು ಎಂದರು.

ಕೇಂದ್ರ ಬಜೆಟ್ ಮಂಡನೆ ನಂತರ ಪ್ರತಿಕ್ರಿಯೆ:

ಕೇಂದ್ರ ಸರಕಾರ ಫೆ.1 ರಂದು 2024–25 ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆ ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳನ್ನು ಪರಿಶೀಲನೆಯನ್ನು ನಡೆಸಲಾಗಿದೆ ಎಂದರು.

ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ:

ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲು ವಾವಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News