ಮೋದಿಯವರಿಗೆ ರಾಷ್ಟ್ರೀಯ ಶೋಕಾಚರಣೆಗಿಂತ ರಾಜಕೀಯ ಮುಖ್ಯವೇ? : ಹರಿಪ್ರಸಾದ್
ಬಿ.ಕೆ.ಹರಿಪ್ರಸಾದ್
ಬೆಂಗಳೂರು : ‘ಪ್ರಧಾನಿ ಮೋದಿಯವರು ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ದೇಶಕ್ಕೆ ಹಿಂದಿರುಗಿದ್ದು ಬಿಹಾರದಲ್ಲಿ ಚುನಾವಣಾ ರ್ಯಾಲಿ ನಡೆಸಲಿಕ್ಕಾಗಿಯೇ?, ಮೋದಿಯವರಿಗೆ ರಾಷ್ಟ್ರೀಯ ಶೋಕಾಚರಣೆಗಿಂತ ರಾಜಕೀಯ ಮುಖ್ಯವೇ?’ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಪ್ರಧಾನಿ ಮೋದಿ ಸೌದಿ ಅರೇಬಿಯಾದಿಂದ ಏಕೆ ಹಿಂತಿರುಗಿದರು ಎಂಬುದು ನನಗೆ ಅರ್ಥವಾಗುತ್ತಿಲ್ಲ. ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿಲ್ಲ. ನಿರ್ಣಾಯಕ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿಲ್ಲ, ದಾಳಿಯ ನಂತರ ಅವರು ಪತ್ರಿಕಾಗೋಷ್ಠಿ ನಡೆಸಲಿಲ್ಲ ಎಂದು ಕೇಳಿದ್ದಾರೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡ ಬಲಿಪಶುಗಳನ್ನು ಮೋದಿ ಅವರು ಭೇಟಿ ಮಾಡಲಿಲ್ಲ. ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಲಿಲ್ಲ ಎಂದು ಹರಿಪ್ರಸಾದ್ ಅವರು ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.