ದ್ವೇಷ ಭಾಷಣ ಪ್ರಕರಣ: ಬಿಜೆಪಿ ಶಾಸಕ ಸಿಮೆಂಟ್ ಮಂಜು ಆಪ್ತ ಸಹಾಯಕನ ಬಂಧನ

Update: 2023-07-02 13:37 GMT

ರಘು- ಬಂಧಿತ ಆರೋಪಿ

ಹಾಸನ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಆಪ್ತ ಸಹಾಯಕ, ಬಜರಂಗದಳ ನಾಯಕ ರಘು ಸಹಚರ ಎಂದು ಗುರುತಿಸಿಕೊಂಡಿರುವ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಶಾಸಕರ ಆಪ್ತ ಸಹಾಯಕ ರಘು ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. 

ಈತ ಬಜರಂಗದಳ ಸಕ್ರಿಯ ಕಾರ್ಯಕರ್ತ ಎಂದು ಹೇಳಲಾಗಿದ್ದು, ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿ ಎಂದು ತಿಳಿದು ಬಂದಿದೆ. 

ಶಾಸಕ ಸಿಮೆಂಟ್ ಮಂಜು ಆಪ್ತ ಸಹಾಯಕನಾಗಿ ಇತ್ತೀಚಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದ ರಘು ಅನೇಕ ಪ್ರಕರಣಗಳಲ್ಲಿ ಬಾಗಿಯಾಗಿದ್ದ ಎಂದು ಹೇಳಲಾಗಿದೆ. 

ದ್ವೇಷ ಭಾಷಣ ಪ್ರಕರಣದಲ್ಲಿ  ಇಲ್ಲಿಯ ವರಗೆ 6 ಜನರನ್ನು ಪೋಲಿಸರು ಬಂದಿಸಿದ್ದಾರೆ. ಇನ್ನು ತಲೆ ಮರೆಸಿಕೊಂಡಿರುವ ಬಜರಂಗದಳ ನಾಯಕ ರಘು ಬಂಧನಕ್ಕೆ ಪೊಲೀಸರಯ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. 

ಘಟನೆ ವಿವರ: ಗೋ ಹತ್ಯೆ ತಡೆಯುವಲ್ಲಿ ಪೋಲಿಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಸಕಲೇಶಪುರ ಪಟ್ಟಣದಲ್ಲಿ ಶುಕ್ರವಾರ (ಜೂ.30) ನಡೆದ ಬಜರಂಗದಳದ ಪ್ರತಿಭಟನೆಯಲ್ಲಿ ಸಂಘಟನೆಯ ನಾಯಕ ರಘು, ''ತರಕಾರಿ, ಮೀನು ಮಾರಾಟ ಮಾಡಲು ಹಿಂದೂಗಳ ಮನೆಯ ಬಳಿ ಬರುವಂತ ವ್ಯಾಪಾರಿಗಳು ಎಚ್ಚರಿಕೆಯಿಂದಿರಿ, ಇಲ್ಲಾಂದ್ರೆ ನಮ್ಮಲ್ಲಿರುವ ಕೋವಿಯೊಳಗಿನ ಗುಂಡು ಹೊರಗಡೆ ಬರುತ್ತೆ, ನಾವು ಕೂಡ ಗುಂಡು ಹಾರಿಸಬೇಕಾಗುತ್ತದೆ'' ಎಂದು ಬೆದರಿಕೆ ಹಾಕಿದ್ದ.

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News