ರೈತರ ಕಣ್ಣೀರು ಒರೆಸಬೇಕಿದ್ದ ರಾಜ್ಯ ಸರಕಾರ ಕೈಕಟ್ಟಿ ಕೂತಿದೆ : ಎಚ್‌.ಡಿ.ಕುಮಾರಸ್ವಾಮಿ

Update: 2024-05-16 12:44 IST
ರೈತರ  ಕಣ್ಣೀರು ಒರೆಸಬೇಕಿದ್ದ ರಾಜ್ಯ ಸರಕಾರ ಕೈಕಟ್ಟಿ ಕೂತಿದೆ : ಎಚ್‌.ಡಿ.ಕುಮಾರಸ್ವಾಮಿ

ಎಚ್.ಡಿ. ಕುಮಾರಸ್ವಾಮಿ (Photo : X/@hd_kumaraswamy)

  • whatsapp icon

ಬೆಂಗಳೂರು : "ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಸರಕಾರ ಕೈಕಟ್ಟಿ ಕೂತಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, "ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ" ಎಂದು ಅಸಮಾಧಾನ ಹೊರಹಾಕಿದ್ದಾರೆ.

"ರಾಜ್ಯ ಸರಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು" ಎಂದು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News