ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಶಿಫಾರಸು ಪತ್ರ ಕೊಟ್ಟ ಸಿಎಂ ಸಿದ್ದರಾಮಯ್ಯ: ಎಚ್.ಡಿ ಕುಮಾರಸ್ವಾಮಿ ಆರೋಪ

Update: 2023-06-28 06:32 GMT

ಬೆಂಗಳೂರು: ''ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CM of Karnataka ವೋ ಅಥವಾ Corruption of Karnataka ವೋ??'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ''ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್'' ಎಂದು ಕಿಡಿಕಾರಿದ್ದಾರೆ. 

''ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ.  4 ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ (!?) ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ'' ಎಂದು ಹೇಳಿದ್ಧಾರೆ. 

''ಈ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ'' ವಾಗ್ದಶಳಿ ನಡೆಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News