ಎಚ್.ಡಿ.ಕುಮಾರಸ್ವಾಮಿಗೆ ಭಾರೀ ಅಂತರದಲ್ಲಿ ಗೆಲುವು

Update: 2024-06-04 10:18 GMT

ಮಂಡ್ಯ: ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ವಿರುದ್ಧ 2,82,704 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ.ಕುಮಾರಸ್ವಾಮಿ ಅವರು 8,47,482 ಮತಗಳಿಸಿದರೆ, ವೆಂಕಟರಮಣೇಗೌಡ(ಸ್ಟಾರ್ ಚಂದ್ರು) 5,64,778 ಮತಪಡೆದಿದ್ದಾರೆ.

ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ಮಂಡ್ಯ ಕ್ಷೇತ್ರವು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಹಾಗಾಗಿ ಜೆಡಿಎಸ್‌- ಕಾಂಗ್ರೆಸ್‌ ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿತ್ತು. ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ನಡೆದರೂ,  ಮಂಡ್ಯ ಕ್ಷೇತ್ರದಲ್ಲಿ 7 ಜನ ಕಾಂಗ್ರೆಸ್ ಶಾಸಕರಿದ್ದರೂ ಕೂಡ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವಲ್ಲಿ ಕಾಂಗ್ರೆಸ್ ನಾಯಕರು ವಿಫಲರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News