ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ

Update: 2023-09-06 06:19 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ಅವರು ಬುಧವಾರ ಬೆಳಗ್ಗೆ ಭೇಟಿಯಾಗಿದ್ದಾರೆ.

ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಪೂರ್ಣ ಗುಣಮುಖರಾಗಿ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಿ.ವೈ ವಿಜಯೇಂದ್ರ ಅವರ ಆರೋಗ್ಯ ಕುಶಲೋಪರಿ ವಿಚಾರಿಸಿದರು.

ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ಮುಖಂಡ ಸೋಮಶೇಖರ್ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News