ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ; ಆದೇಶ ಕಾಯ್ದಿರಿಸಿದ ನ್ಯಾಯಾಲಯ
Update: 2024-05-04 11:40 GMT
ಬೆಂಗಳೂರು : ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.
ಇಂದು ಸಂಜೆಯೊಳಗೆ ಮಧ್ಯಂತರ ಆದೇಶದ ಬಗ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಲಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ರಕ್ಷಣೆ ನೀಡಿದರೆ ತನಿಖೆ ಸಹಕರಿಸುತ್ತೇವೆ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್ ಪಿಸಿ ಜಗದೀಶ್ ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇದೆ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು. ವಾದ ಪ್ರತಿ ವಾದ ಆಲಿಸಿ ನ್ಯಾಯಾಧೀಶ ತೀರ್ಪುನ್ನು ಕಾಯ್ದಿರಿಸಿದೆ.