ಪಕ್ಷಕ್ಕೆ ಮುಜುಗರ ಆಗುವ ಕೆಲಸ ಮಾಡಿಲ್ಲ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

Update: 2023-12-14 12:24 GMT

ಬೆಳಗಾವಿ: ಆಡಳಿತಾರೂಢ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾನು ಪಾಲ್ಗೊಂಡಿಲ್ಲ. ಬದಲಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದಿದ್ದ ಔತಣ ಕೂಟದಲ್ಲಿ ಭಾಗವಹಿಸಿದ್ದೆ.  ಬಿಜೆಪಿಗೆ ಮುಜುಗರ ತರುವ ಕೆಲಸವನ್ನು ನಾನು ಮಾಡಿಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಬಾಡಿದ ಅವರು, ಬುಧವಾರ ರಾತ್ರಿ 10ಗಂಟೆಯ ವರೆಗೆ ನಾನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಇದ್ದೆ. ಅವರು ಶಾಸಕರಿಗೆ ಊಟ ಕೊಡಿಸಿದರು. ಅದೇ ರೀತಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಔತಣಕೂಟದಲ್ಲಿಯೂ ಪಾಲ್ಗೊಂಡಿದ್ದೇನೆ ಎಂದರು.

ಲೋಕಸಭೆ ಸ್ಪರ್ಧಿಸುವುದಿಲ್ಲ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಕೊಡಗು-ಮೈಸೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಡವಿದೆ. ಆದರೆ, ನಾನು 2028ಕ್ಕೆ ಮತ್ತೆ ಶಾಸಕನಾಗಿ ಆಯ್ಕೆ ಆಗಬೇಕೆಂಬ ಉದ್ದೇಶ ಹೊಂದಿದ್ದೆನೆ ಎಂದು ಅವರು ವಿವರಣೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News