ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ
Update: 2023-07-23 16:35 GMT
ಬೆಂಗಳೂರು, ಜು.23: ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯೆತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಗರಿಷ್ಟ ಉಷ್ಣಾಂಶ 28 ಮತ್ತು ಕನಿಷ್ಟ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ತಿಳಿಸಿದೆ.