ರಾಜ್ಯದಲ್ಲಿ ಅಕ್ಟೋಬರ್ 16 ರಿಂದ ಭಾರೀ ಮಳೆ ಸಾಧ್ಯತೆ; 4 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’
Update: 2023-10-14 17:40 GMT
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದೇ 16 ಹಾಗೂ 17ರಂದು ಎರಡು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಹಾಗೂ ರವಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.