ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು;‌ ಸಚಿವ ಸಂತೋಷ್ ಲಾಡ್‌ ಗೆ ಧನ್ಯವಾದ ಹೇಳಿದ ಪ್ರವಾಸಿಗರು

Update: 2025-04-23 10:26 IST
ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು;‌ ಸಚಿವ ಸಂತೋಷ್ ಲಾಡ್‌ ಗೆ ಧನ್ಯವಾದ ಹೇಳಿದ ಪ್ರವಾಸಿಗರು
  • whatsapp icon

ಬೆಂಗಳೂರು:  ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ತೊಂದರೆಗೊಳಗಾಗಿರುವ ಕನ್ನಡಿಗ ಪ್ರವಾಸಿಗರು ಸಚಿವ ಸಂತೋಷ್‌ ಲಾಡ್‌ ಅವರ ಸಹಾಯಕ್ಕೆ ಧನ್ಯವಾದ ಹೇಳಿದ್ದಾರೆ.

"ಸಚಿವ ಲಾಡ್‌ ಅವರಿಗೆ ಬೆಳಗ್ಗೆ ಕರೆ ಮಾಡಿದ್ದೆ. ಅವರು ಹತ್ತು ನಿಮಿಷದಲ್ಲಿ ಬರುತ್ತೇನೆ ಎಂದಿದ್ದರು. ಅವರು ಹೇಳಿದಂತೆ ತಮ್ಮ ತಂಡದೊಂದಿಗೆ ಇಲ್ಲಿಗೆ ಬಂದರು. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡರು. ಲಾಡ್‌ ಅವರು ಹಾಗೂ ಕರ್ನಾಟಕ ಸರ್ಕಾರ ಸದಾ ನಮ್ಮೊಂದಿಗೆ ಇದೆ. ಲಾಡ್‌ ಅವರಿಗೆ ಧನ್ಯವಾದಗಳು" ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.

ಸಂತ್ರಸ್ತರಾಗಿರುವ ಕನ್ನಡಿಗ ಪ್ರವಾಸಿಗರಿಗೆ ಲಾಡ್‌ ಅವರು ಧೈರ್ಯ ಹೇಳಿ ಅವರ ಯೋಗಕ್ಷೇಮವನ್ನೂ ವಿಚಾರಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News