ಕೇಂದ್ರ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡುವಂತೆ 'ಕೈ' ಶಾಸಕರಿಗೆ ಹೈಕಮಾಂಡ್ ಸೂಚನೆ

Update: 2024-01-15 15:21 GMT

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಆರೋಪಗಳನ್ನು ಮಾಡುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಲು ಕೇಂದ್ರ ಸರಕಾರದ ವೈಫಲ್ಯಗಳನ್ನು ಸಮರ್ಥವಾಗಿ ಜನರ ಮುಂದಿಡುವಂತೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರಿಗೆ ಹೈಕಮಾಂಡ್ ಸ್ಪಷ್ಟ ಸೂಚನೆ ರವಾನಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಶಾಸಕರು, ಸಚಿವರ ಸಭೆ ಹಾಗೂ ಹೊಸದಿಲ್ಲಿಯಲ್ಲಿ ನಡೆದಂತಹ ಸಚಿವರ ಸಭೆಯಲ್ಲಿ ಸರಕಾರದ ನ್ಯೂನತೆಗಳನ್ನು ಎತ್ತಿ ಹಿಡಿದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸುವಾಗ, ಅವರಿಗೆ ಸಮಪರ್ಕವಾಗಿ ಉತ್ತರ ಕೊಡಲು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯ ಬೆಂಬಲಕ್ಕೆ ಸಚಿವರು, ಶಾಸಕರು ಯಾಕೆ ಪರಿಣಾಮಕಾರಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಹೈಕಮಾಂಡ್ ನಾಯಕರು ಪ್ರಶ್ನಿಸಿದ್ದಾರೆ.

ನಾವು ಗಮನಿಸಿರುವಂತೆ ಕೆಲವೊಂದು ಸಂದರ್ಭಗಳಲ್ಲಿ ಕೇವಲ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮಾತ್ರ ಸರಕಾರದ ಸಮರ್ಥನೆಗೆ ನಿಲ್ಲುತ್ತಾರೆ. ಶಾಸಕರು, ಸಚಿವರಾಗಿ ನೀವುಗಳ ಸಹ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಲು ಸಿದ್ಧತೆ ಮಾಡಿಕೊಳ್ಳಬೇಕು. ಕೇಂದ್ರ ಸರಕಾರದ ವೈಫಲ್ಯಗಳನ್ನು ಹಾಗೂ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಹೈಕಮಾಂಡ್ ನಾಯಕರು ಹೇಳಿದ್ದಾರೆ.

ರಾಜ್ಯದಲ್ಲಿನ ಬರ ಪರಿಸ್ಥಿತಿ, ಕೇಂದ್ರ ಸರಕಾರದಿಂದ ಇನ್ನೂ ಬಾರದ ಪರಿಹಾರ, ಗ್ಯಾರಂಟಿ ಯೋಜನೆಗಳಿಂದ ಬಡವರ ಜೀವನದಲ್ಲಿ ಆಗುತ್ತಿರುವ ಬದಲಾವಣೆಗಳು, ಪ್ರತಿಪಕ್ಷದ ನಾಯಕರು, ಕೇಂದ್ರದ ಸಚಿವರು ಮಾಡುವ ಆರೋಪಗಳ ಕುರಿತು ಅಧ್ಯಯನ ನಡೆಸಿ, ಅವರಿಗೆ ತಿರುಗೇಟು ನೀಡುವಂತೆ ಶಾಸಕರು, ಸಚಿವರಿಗೆ ಸೂಚನೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News