ಹೈಕೋರ್ಟ್ ಕಲಾಪಗಳ ವೀಡಿಯೊ ಮರುಪ್ರಸಾರ ಸ್ಥಗಿತ ಕೋರಿ ಪಿಐಎಲ್ | ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ
Update: 2024-09-23 16:05 GMT
ಬೆಂಗಳೂರು : ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೇಳಿಕೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ನ್ಯಾಯಾಲಯದ ಕಲಾಪ ಪ್ರಕ್ರಿಯೆಯ ನೇರ ಪ್ರಸಾರದ ಮರುಪ್ರಸಾರ ಸ್ಥಗಿತಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.
ಸಾಮಾಜಿಕ ಜಾಲಾತಾಣಗಳು, ವೈಯುಕ್ತಿಕ ಖಾತೆಗಳು ಎಡಿಟ್ ಮಾಡಿ ಮರು ಪ್ರಸಾರ ಮಾಡುವುದನ್ನು ತಕ್ಷಣ ಸ್ಥಗಿತಗೊಳಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಹೈಕೋರ್ಟ್‌ಗೆ ಸಾವರ್ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ಬೆಳಗ್ಗೆ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿದರು. ವಕೀಲರ ಮನವಿ ಆಲಿಸಿದ ಪೀಠ ವಿಚಾರಣೆಯನ್ನು ಮಂಗಳವಾರ(ಸೆ.24) ನಡೆಸುವುದಾಗಿ ತಿಳಿಸಿತು.