ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿದ ಹೈಕೋರ್ಟ್
Update: 2025-04-04 16:55 IST
ಬೆಂಗಳೂರು: ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಹೈಕೋರ್ಟ್ ಆದೇಶಿದೆ.
ಸುವರ್ಣಸೌಧದ ಬಳಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುವಾಗ ಲಾಠಿಚಾರ್ಜ್ ಮಾಡಿದ್ದನ್ನು ನ್ಯಾಯಾಂಗ ತನಿಖೆ ಕೋರಿ ಬಸವ ಜಯಮೃತ್ಯುಂಜಯ ಸ್ವಾಮಿ, ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ಸರಕಾರಕ್ಕೆ ಸೂಚನೆ ನೀಡಿದೆ. ಅಲ್ಲದೆ, ಕಾಲಮಿತಿಯಲ್ಲಿ ತನಿಖೆ ನಡೆಸಿ ವರದಿಗೆ ಆದೇಶಿದೆ.
ಹೋರಾಟಗಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿ, ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟಿಸುವಾಗ ಪೋಲೀಸರು ದುರುದ್ದೇಶಪೂರಿತವಾಗಿ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ಆರೋಪಿಸಿದ್ದರು. ವಾದ ಆಲಿಸಿ ಹೈಕೋರ್ಟ್ ಮೇಲಿನ ಆದೇಶ ನೀಡಿದೆ.