ಸಂಸದ ಸ್ಥಾನ ಅಸಿಂಧು: ಮಧ್ಯಂತರ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿ ವಜಾ
Update: 2023-09-11 12:40 GMT
ಬೆಂಗಳೂರು: ಚುನಾವಣಾ ಅಕ್ರಮ ಆರೋಪದ ಮೇಲೆ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಸ್ಥಾನವನ್ನು ಅಸಿಂಧು ಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮೇಲ್ಮನವಿ ಸಲ್ಲಿಸುವವರೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ, ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠವು ಸೋಮವಾರ ಅವರ ಅರ್ಜಿಯನ್ನು ವಜಾಗೊಳಿಸಿದೆ.
ಪ್ರಜ್ವಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ ಹೊಳ್ಳ ಅವರು, ಅಸಿಂಧು ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು.