ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯಿದೆ ಸೆಕ್ಷನ್ 13(3)ಕ್ಕೆ ಮಧ್ಯಂತರ ತಡೆ ವಿಧಿಸಿದ ಹೈಕೋರ್ಟ್

Update: 2023-11-05 15:17 GMT

ಬೆಂಗಳೂರು, ನ.5: ಜನನ ಮತ್ತು ಮರಣ ದಿನಾಂಕ ಪರಿಶೀಲಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್ ಮತ್ತು ಮುನ್ಸಿಫ್ ನ್ಯಾಯಗಳಿಂದ ಕಸಿದು ಕಂದಾಯ ಇಲಾಖೆಯ ಸಹಾಯಕ ಆಯುಕ್ತರಿಗೆ ನೀಡಿರುವ ಜನನ ಮತ್ತು ಮರಣ ನೋಂದಣಿ(ತಿದ್ದುಪಡಿ) ಕಾಯಿದೆ 2023ರ ಸೆಕ್ಷನ್ 13(3)ಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜನನ ಮತ್ತು ಮರಣ ನೋಂದಣಿ(ತಿದ್ದುಪಡಿ) ಕಾಯಿದೆ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ವಿಚಾರಣೆ ನಡೆಸಿತು.

ಕಾಯಿದೆಯ ಸೆಕ್ಷನ್ 13(3)ರ ಅನ್ವಯ ಮ್ಯಾಜಿಸ್ಟ್ರೇಟ್ ಮುಂದೆ ಪರಿಗಣನೆಗೆ ಬಾಕಿ ಇರುವ ಅರ್ಜಿಗಳ ಕುರಿತು ಸದ್ಯ ಗೊಂದಲ ಇರುವುದರಿಂದ ಕೇಂದ್ರ ಸರಕಾರ ಆಕ್ಷೇಪಣೆ ಸಲ್ಲಿಸುವವರೆಗೆ ಅಥವಾ ಮುಂದಿನ ವಿಚಾರಣೆಯವರೆಗೆ ಸೆಕ್ಷನ್ 13(3)ಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ತಿದ್ದುಪಡಿ ಕಾಯಿದೆಯನ್ನು ಪ್ರಶ್ನಿಸಿರುವುದರಿಂದ ಪ್ರಕರಣದ ವಿಚಾರಣೆ ಅಗತ್ಯವಾಗಿದ್ದು, ಕೇಂದ್ರ ಸರಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ. ವಕೀಲರ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ನ.29ಕ್ಕೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News