ರನ್ಯಾ ರಾವ್ ಬಗ್ಗೆ ಅಸಭ್ಯ ಪದ ಬಳಕೆ: ಯತ್ನಾಳ್ ಗೆ ಹೈಕೋರ್ಟ್ ಮಧ್ಯಂತರ ರಿಲೀಫ್
Update: 2025-04-01 14:49 IST

ಬೆಂಗಳೂರು:ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಕೆ ಆರೋಪದ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣದ ವಿಚಾರವಾಗಿ ವೈದ್ಯೆ ಅಕುಲಾ ಅನುರಾಧ ಎಂಬವರು ನೀಡಿದ್ದ ದೂರಿನ ಮೇರೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.ಹೀಗಾಗಿ ಪ್ರಕರಣ ರದ್ದು ಕೋರಿ ಯತ್ನಾಳ್ ಅರ್ಜಿ ಸಲ್ಲಿಸಿದ್ದರು.