13352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

Update: 2023-10-12 17:17 GMT

ಬೆಂಗಳೂರು, ಅ.12: ರಾಜ್ಯದ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ, ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ. ಮಾರ್ಚ್ 8, 2023 ಆಯ್ಕೆ ಪಟ್ಟಿಯಂತೆ ನೇಮಕಾತಿ ಅಂತಿಮಗೊಳಿಸಲು ಸೂಚನೆ ನೀಡಲಾಗಿದೆ.

ಸರಕಾರದ ಅಧಿಸೂಚನೆಯಂತೆ ಆದಾಯ ಪ್ರಮಾಣ ಪತ್ರ ಸಲ್ಲಿಸಿದವರ ಆಯ್ಕೆ ಅಂತಿಮವಾಗಿದೆ. ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳ ಆಯ್ಕೆ ಮುಂದೂಡಲಾಗಿದೆ. ನೊಂದ ಅಭ್ಯರ್ಥಿಗಳು ಕೆಎಟಿಯಲ್ಲಿ ದಾವೆ ಹೂಡಬಹುದಾಗಿದೆ. ದಾವೆ ಇತ್ಯರ್ಥವಾಗುವವರೆಗೆ ವಿವಾದಿತ ಅಭ್ಯರ್ಥಿಗಳ ಆಯ್ಕೆ ಮುಂದೂಡಿಕೆ ಆಗಿರುತ್ತದೆ.

2023 ಜೂ.8ರ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳ ಬದಲಾವಣೆ ಆಗಿದೆ. ಹೊಸ ನೀತಿಯಲ್ಲಿ 451 ಅಭ್ಯರ್ಥಿಗಳಿಗೆ ಬದಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕೆಎಟಿ ಆದೇಶದ ಬಳಿಕ ಬದಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಹಿಂದುಳಿದ ವರ್ಗದಲ್ಲಿ ಪರಿಗಣಿಸುವಾಗ ವಿವಾಹಿತ ಮಹಿಳೆಯರಿಗೆ ಪತಿಯ ಆದಾಯ ಪರಿಗಣನೆ ಮಾಡಲಾಗುವುದು ಎಂದು ರಾಜ್ಯ ಸರಕಾರ ನಿಯಮ ಅನ್ವಯಿಸಿತ್ತು.

ರಾಜ್ಯ ಸರಕಾರದ ಈ ನೀತಿಯನ್ನು ಏಕ ಸದಸ್ಯ ಪೀಠ ಅಮಾನ್ಯಗೊಳಿಸಿತ್ತು. ಅಭ್ಯರ್ಥಿಯ ತಂದೆಯ ಜಾತಿ, ಆದಾಯ ಪ್ರಮಾಣ ಪತ್ರ ಅಧರಿಸಲು ಸೂಚಿಸಿತು. ಇದೀಗ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ.

ಉಳಿದ ಅಭ್ಯರ್ಥಿಗಳ ಆಯ್ಕೆಯನ್ನು ಮಾತ್ರ ಹೈಕೋರ್ಟ್ ಮುಂದೂಡಿದೆ. 6 ರಿಂದ 8ನೆ ತರಗತಿಗಳಿಗೆ ಶಿಕ್ಷಕರ ಕೊರತೆಯನ್ನು ಪರಿಗಣಿಸಿ ಹೈಕೋರ್ಟ್ ಆದೇಶ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News