ʼಕೆಪಿಟಿಸಿಎಲ್ʼ ಸಹಾಯಕ ಎಂಜಿನಿಯರ್‌ಗಳ ನೇಮಕಾತಿಗೆ ಹೈಕೋರ್ಟ್ ಅನುಮತಿ
Update: 2024-02-07 11:13 GMT
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಗೆ 404 ಸಹಾಯಕ ಎಂಜಿನಿಯರ್ ಗಳ ನೇಮಕಕ್ಕೆ ಷರತ್ತು ಬದ್ಧ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿದೆ.
ಕೆಪಿಟಿಸಿಎಲ್ ಆಯ್ಕೆ ಪರೀಕ್ಷೆ ಪ್ರಕ್ರಿಯೆಯಲ್ಲಿ ಲೋಪವೆಂದು ಕೆಲ ಅಭ್ಯರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ.ಶಿವಶಂಕರೇಗೌಡ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜೊತೆಗೆ ಈ ನೇಮಕಾತಿಯು ಹೈಕೋರ್ಟ್ ನ ಅಂತಿಮ ತೀರ್ಪಿಗೆ ಬದ್ದವಾಗಿರಬೇಕು ಎಂದು ಷರತ್ತು ವಿಧಿಸಿದ್ದು, ಹೈಕೋರ್ಟ್ ತೀರ್ಪಿಗೆ ಅನುಗುಣವಾಗಿ ಸೇವಾ ಜೇಷ್ಠತೆ ಕಾಯ್ದುಕೊಳ್ಳಬೇಕು ತಾಕೀತು ಮಾಡಿದೆ.