ಮುಡಾ ಪ್ರಕರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಈಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್

Update: 2025-03-07 17:33 IST
ಮುಡಾ ಪ್ರಕರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ವಿರುದ್ಧದ ಈಡಿ ಸಮನ್ಸ್​ ರದ್ದುಗೊಳಿಸಿದ ಹೈಕೋರ್ಟ್
  • whatsapp icon

ಬೆಂಗಳೂರು: ಮುಡಾ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಈಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕುರಿತು ವಿಚಾರಣೆ ಹಾಜರಾಗುವಂತೆ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಈಡಿ ಸಮನ್ಸ್​ ಜಾರಿ ನೀಡಿತ್ತು. ಹೀಗಾಗಿ ಈಡಿ ಸಮನ್ಸ್ ರದ್ದು ಕೋರಿ ಇಬ್ಬರು ಹೈಕೋರ್ಟ್​ ಮೊರೆ ಹೋಗಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಈಡಿ ಸಮನ್ಸ್​ ರದ್ದುಗೊಳಿಸಿ ಆದೇಶ ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಸಹಿತ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಮುಡಾ ಪ್ರಕರಣದಲ್ಲಿ ಈಡಿ ಪ್ರವೇಶಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮ್ಯಯನವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ ಸೇರಿದಂತೆ ಇತರರಿಗೆ ಈಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದಕ್ಕೆ ತಡೆ ನೀಡುವಂತೆ ಸಿಎಂ ಪತ್ನಿ ಹಾಗೂ ಭೈರತಿ ಸುರೇಶ್ ಅವರು ಇಬ್ಬರು ಪ್ರತ್ಯೇಕವಾಗಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, ಈಡಿ ಸಮನ್ಸ್​ಗೆ ತಡೆಯಾಜ್ಞೆ ನೀಡಿತ್ತು. ಇದೀಗ ಕೋರ್ಟ್​ ಈಡಿ ಸಮನ್ಸ್​ ಅನ್ನೇ ರದ್ದು ಮಾಡಿ ಆದೇಶಿಸಿದೆ. ಇದರಿಂದ ಇಬ್ಬರು ಈಡಿ ವಿಚಾರಣೆಯಿಂದ ಪಾರಾಗಿದ್ದಾರೆ.

ಪಾರ್ವತಿ ಅವರು ಅಕ್ಟೋಬರ್ 1, 2024 ರಂದು ವಿವಾದಿತ ಸೈಟ್ ಗಳನ್ನು ಹಿಂದಿರುಗಿಸಿದ್ದಾರೆ. ಮುಡಾದ 14 ಸೈಟ್ ಗಳಲ್ಲದೇ 1708 ಸೈಟ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ಸೈಟ್ ಗಳನ್ನು ಈಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಈಡಿ ಪರ್ಯಾಯ ತನಿಖೆ ನಡೆಸುತ್ತಿದೆ. ಈಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಈಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ಸೈಟ್​ಗಳನ್ನು ಈಡಿ ಜಪ್ತಿ ಮಾಡಿಲ್ಲ. ಆದರೆ ಇತರೆ 160 ಸೈಟ್ ಗಳನ್ನು ಈಡಿ ಜಪ್ತಿ ಮಾಡಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲವೆಂದು ವರದಿ ಸಲ್ಲಿಸಿದ್ದಾರೆ ಎಂದು ಸಿಎಂ ಪತ್ನಿ ಪಾರ್ವತಿ ಪರ ಸಂದೇಶ್ ಚೌಟ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News