ಯತ್ನಾಳ್, ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
Update: 2024-12-12 10:51 GMT
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ರೈತ ಆತ್ಮಹತ್ಯೆ ಎಂದು ಟ್ವೀಟ್ ಮಾಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಮೃತ ರೈತನ ತಂದೆಯ ಹೇಳಿಕೆ ಆಧರಿಸಿ ಟ್ವೀಟ್ ಮಾಡಿ, ಬಳಿಕ ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಹೀಗಾಗಿ ಪ್ರಕರಣ ರದ್ದುಪಡಿಸುವಂತೆ ತೇಜಸ್ವಿ ಸೂರ್ಯ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು. ಇದನ್ನು ಮಾನ್ಯ ಮಾಡಿದ ಹೈಕೋರ್ಟ್ ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್ ರದ್ದುಪಡಿಸಿದೆ.
ಯತ್ನಾಳ್ ವಿರುದ್ಧದ ಪ್ರಕರಣ ರದ್ದು :
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್ ಮಹತ್ವ ಆದೇಶ ನೀಡಿದೆ. ಕೆಪಿಸಿಸಿಯ ಎಸ್.ಮನೋಹರ್ ದೂರು ದಾಖಲಿಸಿದ್ದರು.