ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ | ಗೋಪಾಲ್ ಜೋಶಿ ಸಹಿತ ಮೂವರ ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ
Update: 2024-10-28 10:45 GMT
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ.ಸುಲಿಗೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿ, ಸಹಿತ ಮೂವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಕುರಿತು ಆರೋಪಿಗಳು ಪ್ರಕರಣ ರದ್ದುಪಡಿಸಲು ಕೋರಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ಮೇಲಿನ ಆದೇಶ ನೀಡಿದೆ. ಇಡೀ ಪ್ರಕರಣ ಹಣದ ವಿಚಾರಕ್ಕೆ ಸಂಬಂಧಿಸಿದ್ದಾಗಿದೆ. ಹೀಗಾಗಿ, ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ವಿಧಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಿದೆ.
ಸುನಿತಾ ಚೌಹಾನ್ ಅವರು ನೀಡಿದ್ದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿತ್ತು.